ಸೂರ್ಯ ಬಂದದ್ದೇ ತಡವಾಗಿ,
ನಮ್ಮನೆಯ ಗ್ರಿಲ್ ಮುರಿದು
ತುಡುಗಾಗಿ ಹೋಗಿ,
ಹರೆಯದ ಹೆಣ್ಣು ಬೊಬ್ಬಿಟ್ಟು ಕೂಗಿ
ಗಟಾರಿನಲ್ಲೆಲ್ಲ ರಕ್ತವೇ ಹರಿದೋಗಿ,
ಹುಲ್ಲ ಮೇಲಿನ ಮಂಜೆಲ್ಲಾ ಕರಗಿ
ಸೂರ್ಯಾ ಬಂದದ್ದೇ ತಡವಾಗಿ.
ಹಕ್ಕಿಸಂಕುಲವೆಲ್ಲ, ಪುಷ್ಪರಾಜಿಗಳೆಲ್ಲ
ಕೌತುಕದಿ ಕಾದು,
ಹೆಣ್ಣು ನೀರುಗ್ಗಿ ರಂಗೋಲಿ ಹಿಡಿದು
ಹೊಟೇಲು, ಬೂತಿನ ಮಾಲೀಕರೆಲ್ಲ
ಸ್ನಾನ ತಿಂಡಿ ಮಾಡಿ
ರೈತ ನೇಗಿಲು ಹೊತ್ತು ಎತ್ತುಗಳ ಹೂಡಿ
ಕೋಳಿ ಕೂಗಿ ಕೂಗಿ ಬೆಚ್ಚಿ
ಜಗದ ಕಂಗಳೆಲ್ಲ ತೆರೆತೆರೆದು ಮುಚ್ಚಿ
ವರ್ಷ ವರ್ಷ ಉರುಳಿ
ಸೂರ್ಯಾ ಬಂದದ್ದೇ ತಡವಾಗಿ.
ಬಂದವನೇ ಬೆಳಕಿನ ಕಾಲರಿಗೆ ಕೈಹಾಕಿ
‘ಯಾಕಯ್ಯೋ ನನಗಿಂತ ಲೇಟಾಗಿ ಬಂದಿ.’
ಏರಿ, ಮೇಲೇರಿ
ಗುಡ್ಡ ಬೆಟ್ಟ ಕಣಿವೆ ಕಾಡುಗಳ
ಹೊಕ್ಕಲಾರದೆ ಬೆವರಿ,
ಅಡ್ಡಡ್ಡ ಬರುವ ಮೋಡನ
ಸೈರಿಸಲಾಗದೆ ಕೆರಳಿ
ಏರುವ ಭ್ರಮೆಯಲ್ಲಿ
ಇಳಿಯುತ್ತಾ ಸಾಗಿ,
ಕೈಲಾಗದ ಹತಾಶೆಗೆ ತಲೆ ಚಚ್ಚಿಕೊಂಡು
ಚೆಲ್ಲಿದ ರಕ್ತ ಕಂಡು ಅಳುತ್ತ ಕೂತ.
ಸೂರ್ಯಾ ಬಂದದ್ದೇ ತಡವಾಗಿ.
2 ಕಾಮೆಂಟ್ಗಳು:
ಸೂರ್ಯನನ್ನು ಚಿತ್ರಿಸಿರುವ ಪರಿಯು ವಿಶೇಷ ಅನುಭವದ ಕುತೂಹಲ ಕೆರಳಿಸುವ ಕವನ .. ಓದುವಾಗ ಮುಂದೇನು ಅಹಬಹುದೋ ಎಂದು ಯೋಚಿಸುತ್ತಾ .. ಮುಂದಿನ ಸಾಲು ಓದಿದಾಗ ಸಿಕ್ಕುವ ಒಂದು ಕಲ್ಪನೆಯ ಚಿತ್ರಣ ನಿಜಕ್ಕೂ ಅತೀ ಸೊಗಸಾಗಿರುತ್ತದೆ .. :)
ಕಾಮೆಂಟ್ ಪೋಸ್ಟ್ ಮಾಡಿ